BIG NEWS: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನಾಳೆ

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮೇ 11ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್, ಎಸ್‌.ಆರ್. ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್. ನರಸಿಂಹ ಅವರನ್ನು ಒಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಅರ್ಜಿಯ ವಿಚಾರಣೆ ನಡೆಸಿತ್ತು.

ನಿರಂತರವಾಗಿರುವ ಸಾಂವಿಧಾನಿಕ ಸಿದ್ಧಾಂತವಿದೆ. ನ್ಯಾಯಾಲಯವು ಶಾಸನವನ್ನು ನಿರ್ದೇಶಿಸಲು ಸಾಧ್ಯವಿಲ್ಲ, ನೀತಿಯ ರಚನೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ. ನೀತಿ ರಚನೆಯ ಕ್ಷೇತ್ರವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಭಟ್ ಅವರು ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read