HomeLatest Newsಸೌಜನ್ಯ ಅತ್ಯಾಚಾರ, ಕೊಲೆ ಹಾಗೂ ಅನಾಥ ಶವಗಳ ಪತ್ತೆ ಕೇಸ್: ಹೊಸ ತನಿಖೆ ಕೋರಿ ಸಲ್ಲಿಸಿದ್ದ...

ಸೌಜನ್ಯ ಅತ್ಯಾಚಾರ, ಕೊಲೆ ಹಾಗೂ ಅನಾಥ ಶವಗಳ ಪತ್ತೆ ಕೇಸ್: ಹೊಸ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮುಂದೂಡಿದೆ.

ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಅರವಿಂದ್ ಕುಮಾರ್ ನೇತೃತ್ವದ ದ್ವೀಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ವಕೀಲರ ಅನುಪಸ್ಥಿತಿ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಲಾಯಿತು.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಉಲ್ಟಾ ಹೊಡೆದಿರುವ ಬಗ್ಗೆಯೂ ತನಿಖೆಯಾಗಬೇಕು. ಮಹಿಳೆಯರು ನಾಪತ್ತೆ, ಅನಾಥ ಶವಗಳು ಪತ್ತೆಯಾಗಿವೆ ಎಂಬ ಬಗ್ಗೆ ದಾಖಲಾಗಿದ್ದ ಪ್ರಕರಣದಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರಿಂ ಕೋರ್ಟ್ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular