HomeKarnatakaಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು...?

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು…?

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ.

ಇತ್ತೀಚೆಗಷ್ಟೇ ಸೂರಜ್ ರೇವಣ್ಣ ಅವರ ವಿರುದ್ಧ ಯುವಕನೊಬ್ಬ ದೂರು ದಾಖಲಿಸಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ದೂರು ನೀಡಿದ್ದ ಯುವಕನ ವಿರುದ್ಧವೇ ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಆ ನಾಪತ್ತೆಯಾಗಿದ್ದ ವ್ಯಕ್ತಿಯೇ ಇಂದು ಹೊಳೆನರಸೀಪುರ ಠಾಣೆಗೆ ಹಾಜರಾಗಿ ತಾನು ಕೂಡ ಸಂತ್ರಸ್ತ ಎಂದು ದೂರು ನೀಡಿದ್ದಾರೆ.

ಸೂರಜ್ ರೇವಣ್ಣ ಅವರಿಂದ ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಈಗಾಗಲೇ ಸಂತ್ರಸ್ತನ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular