HomeKarnatakaBREAKING NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ

BREAKING NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ

ಬೆಂಗಳೂರು: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸೂರಜ್ ನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದ ಬಗ್ಗೆ ಪ್ರತಿ ದೂರು ಕೂಡ ಬಂದಿದ್ದು, ಆ ಬಗ್ಗೆಯೂ ತನಿಖೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು. ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದ್ದು, ಈ ಕೇಸ್ ನ್ನು ಕೂಡ ಸಿಐಡಿ ತನಿಖೆಗೆ ವಹಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular