HomeKarnatakaBREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ...

BREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ಅರೆಸ್ಟ್

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೆಡಿಎಸ್ ಕಾರ್ಯಕರರ್ತನಾಗಿರುವ ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೂರಜ್ ರೇವಣ್ಣ ವಿರುದ್ಧ 377, 342, 506ರಡಿ ಕೇಸ್ ದಾಖಲಾಗಿದೆ. ಜಾಮೀನು ರಹಿತ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು ಇಂದು ಬೆಳಿಗ್ಗೆ ಅವರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular