HomeKarnatakaಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ.

ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೂರಜ್ ರೇವಣ್ಣ ವಿರುದ್ಧ 377, 342, 506ರಡಿ ಕೇಸ್ ದಾಖಲಾಗಿದೆ. ಜಾಮೀನು ರಹಿತ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು ಇಂದು ಬೆಳಿಗ್ಗೆ ಅವರನ್ನು ಬಂಧಿಸಿದ್ದಾರೆ.

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ದೂರು ನೀಡಲಾಗಿದೆ. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ದೂರು ನೀಡಿದಾತನ ವಿರುದ್ಧವೇ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಸೂರಜ್ ರೇವಣ್ಣ ತಾವೇ ಬ್ಲಾಕ್ಮೇಲ್ ಕೇಸ್ ನಲ್ಲಿ ಸಾಕ್ಷಿ ನೀಡಲು ಬಂದಿದ್ದಾರೆ. ಆಡಿಯೋ ರೆಕಾರ್ಡ್ ಮತ್ತು ಫೋಟೋ ನೀಡಲು ಸೂರಜ್ ರೇವಣ್ಣ ಬಂದಿದ್ದು, ಈ ವೇಳೆ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಸಿಇಎನ್ ಠಾಣೆಯಲ್ಲಿ ವಿಚಾರಣೆಗೊಳಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧನದ ನಿರೀಕ್ಷೆಯಿಲ್ಲದೆ ಬಂದಿದ್ದ ಅವರನ್ನು ಬೆಳಗಿನ ಜಾವ ನಾಲ್ಕು ಗಂಟೆವರೆಗೂ ವಿಚಾರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ. ತಾನಾಗಿಯೇ ಬಂದು ಸೂರಜ್ ರೇವಣ್ಣ ಬಲೆಗೆ ಬಿಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular