HomeLatest NewsBREAKING: ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ಸಿಐಡಿಯಿಂದ ಬಿ ರಿಪೋರ್ಟ್ ಸಲ್ಲಿಕೆ

BREAKING: ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ಸಿಐಡಿಯಿಂದ ಬಿ ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಎಂ ಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ.

ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಸೂರಜ್ ವಿರುದ್ಧ ಅಸಹಜ ಲೈಂಗಿಕ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷಾಧಾರಗಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular