HomeKarnatakaBREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.

ಇದೀಗ ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ಸಂತ್ರಸ್ತರನ್ನು ಭೇಟಿಯಾಗುವಂತಿಲ್ಲ. ಸಾಕ್ಷ್ಯ ನಾಶಕ್ಕೆ ಯತ್ನಿಸುವಂತಿಲ್ಲ. ತನಿಖೆಗೆ ವಿಚಾರಣೆಗಳಿಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular