HomeKarnatakaBREAKING NEWS: ಜೈಲುಪಾಲಾದ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ವಿತರಿಸಿದ ಜೈಲಧಿಕಾರಿಗಳು

BREAKING NEWS: ಜೈಲುಪಾಲಾದ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ವಿತರಿಸಿದ ಜೈಲಧಿಕಾರಿಗಳು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ ಸಿ ಡಾ.ಸೂರಜ್ ರೇವಣ್ಣ ಜೈಲು ಪಾಲಾಗಿದ್ದಾರೆ. ಜೈಲು ಸೇರಿರುವ ಸೂರಜ್ ಗೆ ವಿಚಾರಣಾಧೀನ ಕೈದಿ ನಂಬರ್ ವಿತರಿಸಲಾಗಿದೆ.

ಸೂರಜ್ ರೇವಣ್ಣಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಸೆಲ್ ನಲ್ಲಿದ್ದಾರೆ. ಜೈಲಿನ ಅಧಿಕಾರಿಗಳು ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ 6141 ಸಂಖ್ಯೆ ವಿತರಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಯುವಕನೊಬ್ಬ ದೂರು ನೀಡಿದ್ದ. ಸಂತ್ರಸ್ತ ಯುವಕನ ವಿರುದ್ಧ ಪ್ರಕರಣ ದಾಖಲಿಸಲೆಂದು ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದ ಸೂರಜ್ ನನ್ನು ಪೊಲೀಸರು ಸುದೀರ್ಘ ವಿಚಾರಣೆ ನಡೆಸಿ ಬಳಿಕ ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular