ತುಮಕೂರು: ಪಂಚರಾಜ್ಯಗಳ ವಿಧಾನಸಭಾಅ ಚುನಾವಣಾ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.
ತುಮಕೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಗೌಡ, ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ಬದಲಾವಣೆಗಳು ಚುರುಕುಗೊಳ್ಳಲಿವೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಆಂತರಿಕ ಕಿತ್ತಾಟ ನಡೆಯುತ್ತಿದೆ. ಇಬ್ಬರ ನಡೆಗಳು ಸರ್ಕಾರವನ್ನು ಪತನದ ಅಂಚಿಗೆ ತಳ್ಳುತ್ತಿವೆ ಎಂದರು.
ಮುಖ್ಯಮಮ್ತ್ರಿ ಹುದ್ದೆಗಾಗಿ ಕಾಂಗ್ರೆಸ್ ನಾಯಕರಲ್ಲಿತೇ ರೇಸ್ ನಡೆಯುತ್ತಿದೆ. ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಮುಖ್ಯಮಂತ್ರಿಯಾಗಲು ತಯಾರಿ ನಡೆಸಿದ್ದಾರೆ. ಮೇ 10ರಂದು ಮುಹೂರ್ತ ಕೂಡ ನಿಗದಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿವೆ. ಕೇವಲ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ. ಕಾಂಗ್ರೆಸ್ ಒಳಜಗಳದಿಂದಾಗಿ ರಾಜ್ಯದ ಆಡಳಿತ ಯಂತ್ರ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಈಗ ರಾಜ್ಯದಲ್ಲಿ ಚುನಾವಣೆ ನಡೆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯು ಭರ್ಜರಿ ಜಯಭೇರಿ ಬಾರಿಸಲಿದೆ. 175ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

