HomeKarnatakaBIG NEWS: ಮಾಜಿ ಸಚಿವ ಸುರೇಶ್ ಕುಮಾರ್, ರಾಮಚಂದ್ರೇಗೌಡ ಪೊಲೀಸ್ ವಶಕ್ಕೆ

BIG NEWS: ಮಾಜಿ ಸಚಿವ ಸುರೇಶ್ ಕುಮಾರ್, ರಾಮಚಂದ್ರೇಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಪೋಸ್ಟರ್ ಗಳನ್ನು ಹಿಡಿದು ಪೊಲೀಸ್ ಠಾಣೆಗಳ ಎದುರು ನನ್ನನ್ನೂ ಬಂಧಿಸಿ ಎಂದು ಧರಣಿ ನಡೆಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆ ಮುಂಭಾಗ ಮಾಜಿ ಸಚಿವ ಸುರೇಶ್ ಕುಮಾರ್ ಹಾಗೂ ರಾಮಚಂದ್ರೇಗೌಡ, ’ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರ” ಎಂದು ಪೋಸ್ಟರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಧಿಕ್ಕಾರಗಳನ್ನು ಕೂಗಿದ್ದಾರೆ. ಧರಣಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸುರೇಶ್ ಕುಮಾರ್ ಹಾಗೂ ರಾಮಚಂದ್ರ‍ೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಚಿವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular