HomeEntertainment'ಸೂರಿ ಲವ್ಸ್ ಸಂಧ್ಯಾ' ಚಿತ್ರದ ಲಿರಿಕಲ್ ಹಾಡು ರಿಲೀಸ್

‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅಭಿಮನ್ಯು ಕಾಶಿನಾಥ್ ಅಭಿನಯದ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ “ಸೃಷ್ಟಿದಾತ ಶಿವನೇ” ಎಂಬ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಸಾಯಿ ವಿಘ್ನೇಶ್ ಮತ್ತು ನಮಿತಾ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಅರುಣ ಗಿರಿ ಸಂಗೀತ ಸಂಯೋಜನೆ ನೀಡಿದ್ದಾರೆ.    ಇನ್ನುಳಿದಂತೆ ನಿರ್ದೇಶಕ ಯಾದವ್ ರಾಜ್ ಅವರ ಸಾಹಿತ್ಯವಿದೆ.

ಯಾದವ್ ರಾಜ್ ನಿರ್ದೇಶನದ ಈ ಚಿತ್ರದಲ್ಲಿ ಅಭಿಮನ್ಯು ಕಾಶಿನಾಥ್ ಹಾಗೂ ಅಪೂರ್ವ ಪ್ರಮುಖ ಪಾತ್ರದಲ್ಲಿದ್ದು, ಪ್ರತಾಪ್ ನಾರಾಯಣ್, ಪ್ರದೀಪ್, ಭಜರಂಗಿ ಪ್ರಸನ್ನ, ಪಲ್ಲವಿ ಉಳಿದ ಉಳಿದ ತಾರಾಂಗಣದಲ್ಲಿದ್ದಾರೆ. 7 crore ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಲ್ಲಿ ಕೇಟಿ ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಶ್ರೀನಿವಾಸ್ ಛಾಯಾಗ್ರಹಣ, ರಾಜ್ ಕಿಶೋರ್ ನೃತ್ಯ ನಿರ್ದೇಶನ, ಸಿದ್ದಾರ್ಥ್ ನಾಯಕ್ ಸಂಕಲನ, ಡಿಫರೆಂಟ್ ಡ್ಯಾನಿ – ದಿನೇಶ್ ಕಾಸಿ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular