HomeKarnatakaಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ: ತಮ್ಮ ತಂದೆ, ಮಾಜಿ ಪ್ರಧಾನಿಗೆ ಆಗುತ್ತಿರುವ ಅಪಮಾನ ಸಹಿಸುಕೊಳ್ಳುತ್ತಿರುವ...

ಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ: ತಮ್ಮ ತಂದೆ, ಮಾಜಿ ಪ್ರಧಾನಿಗೆ ಆಗುತ್ತಿರುವ ಅಪಮಾನ ಸಹಿಸುಕೊಳ್ಳುತ್ತಿರುವ ಹೆಚ್.ಡಿ.ಕೆ: ಸುರ್ಜೇವಾಲ ವ್ಯಂಗ್ಯ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭೆ ಚುನಾವಣೆಗೆ ಎನ್​ಡಿಎ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷವನ್ನು ಟೀಕಿಸಿದ್ದಾರೆ.

ಕೇವಲ ಮಂತ್ರಿ ಕುರ್ಚಿಗೆ ಅಂಟಿಕೊಳ್ಳಲು ಕುಮಾರಸ್ವಾಮಿ ಅವರು ತಮ್ಮ ತಂದೆ, ಮಾಜಿ ಪ್ರಧಾನಿಗಳಿಗೆ ಆಗುತ್ತಿರುವ ನಿರಂತರ ಅಪಮಾನಗಳನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾನುವಾರ ಮಧ್ಯರಾತ್ರಿ ಬಿಜೆಪಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ ರಾಜ್ಯಸಭಾ ನಾಮನಿರ್ದೇಶನವನ್ನು ನಿರಾಕರಿಸಿದೆ. ಮಾಜಿ ಪ್ರಧಾನಿಗಿಂತ ಬಿಜೆಪಿಯ ಜಿಲ್ಲಾ ಮಟ್ಟದ ಕಟ್ಟಡ ನಿರ್ಮಾಣ ಉಸ್ತುವಾರಿಯಾಗಿದ್ದ ರಾಜ್ಯ ಉಪಾಧ್ಯಕ್ಷ ಎಂ. ನಾಗರಾಜ ಅವರಿಗೆ ಮಣೆ ಹಾಕಲಾಗಿದೆ. ಯಾವುದೇ ಬೆಲೆ ತೆತ್ತಾದರೂ ಸಚಿವ ಸ್ಥಾನ ಉಳಿಸಿಕೊಳ್ಳಬೇಕು ಎಂಬ ಒಂದೇ ಕಾರಣಕ್ಕೆ ಬಿಜೆಪಿ ನಾಯಕರು ಜೆಡಿಎಸ್‌ಗೆ ಮಾಡುತ್ತಿರುವ ನಿರಂತರ ಅವಮಾನಗಳನ್ನು ಕುಮಾರಸ್ವಾಮಿ ಸಹಿಸಿಕೊಳ್ಳುತ್ತಿರುವುದು ಅತ್ಯಂತ ಆಶ್ಚರ್ಯಕರ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್‌ನ ಹಳೆಯ ನಿಲುವುಗಳು ಹಾಗೂ ಇತಿಹಾಸವನ್ನು ನೆನಪಿಸಿರುವ ಸುರ್ಜೇವಾಲ ಐದು ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಜಿ.ಎಸ್. ಬಸವರಾಜು ಅವರು ದೇವೇಗೌಡರನ್ನು ಸೋಲಿಸಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಕರ್ನಾಟಕದ ಮಾಜಿ ಪ್ರಧಾನಿ ಎಂಬ ಗೌರವ ನೀಡಿ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ದೇವೇಗೌಡರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲು ಬೆಂಬಲ ನೀಡಿತ್ತು ಎಂದು ಸುರ್ಜೇವಾಲ ನೆನಪಿಸಿದ್ದಾರೆ.

ಕುಮಾರಸ್ವಾಮಿ ಏನಾದರೂ ಬಿಜೆಪಿಯೊಂದಿಗೆ ಕೈಜೋಡಿಸಿದರೆ ನಾನು ಅವರನ್ನು ನನ್ನ ಮಗನೆಂದು ಒಪ್ಪುವುದಿಲ್ಲ, ತ್ಯಜಿಸುತ್ತೇನೆ ಎಂದು ಸ್ವತಃ ದೇವೇಗೌಡರೇ ಈ ಹಿಂದೆ ಸಾರ್ವಜನಿಕವಾಗಿ ಹೇಳಿದ್ದರು. ಈ ಎಲ್ಲಾ ಹೇಳಿಕೆಗಳನ್ನು ಗಾಳಿಗೆ ತೂರಿ ಅಕ್ಟೋಬರ್ 2023ರಲ್ಲಿ ಜೆಡಿಎಸ್ ಮತ್ತು ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮೋದಿ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಸಚಿವರಾದರು ಎಂದು ನೆನಪಿಸಿದ್ದಾರೆ.

ಇದೀಗ 2026 ರ ಜೂನ್ 7 ರಂದು ಅದೇ ಬಿಜೆಪಿ ಮಾಜಿ ಪ್ರಧಾನಿಗೆ ರಾಜ್ಯಸಭಾ ಟಿಕೆಟ್ ನಿರಾಕರಿಸಿ ಪಕ್ಷದ ಸಾಮಾನ್ಯ ನಾಯಕನಿಗೆ ಮಣೆ ಹಾಕಿದೆ. ಯಾವ ಬೆಲೆ ತೆತ್ತಾದರೂ ಸರಿ, ಅಧಿಕಾರ ಹಿಡಿಯುವುದು ಮತ್ತು ಕುರ್ಚಿ ಉಳಿಸಿಕೊಳ್ಳುವುದು ಮಾತ್ರವೇ ಕರ್ನಾಟಕದಲ್ಲಿ ಜೆಡಿಎಸ್‌ನ ಏಕೈಕ ಮೂಲಮಂತ್ರ ಮತ್ತು ಸಿದ್ಧಾಂತವಾಗಿದೆ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular