ಇಂದು ಸಂಜೆ ವಿಸ್ಮಯ: ಗವಿಗಂಗಾಧರೇಶ್ವರನ ಸ್ಪರ್ಶಿಸಲಿರುವ ʼಸೂರ್ಯರಶ್ಮಿʼ

ಬೆಂಗಳೂರು: ನಾಡಿನಾದ್ಯಾಂತ ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇವತ್ತು ಸಂಜೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಗವಿಗಂಗಾಧರೇಶ್ವರ ಸ್ವಾಮಿಗೆ ಸೂರ್ಯ ರಶ್ಮಿ ಸ್ಪರ್ಶಿಸಲಿದೆ.

ಸಂಜೆ 5.20 ರಿಂದ 5.23 ರ ನಡುವೆ ಸೂರ್ಯರಶ್ಮಿ ಸ್ಪರ್ಶವಾಗಲಿದೆ. ಈಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶದ ನಂತರ ಶಿವನಿಗೆ ವಿಶೇಷ ಅಭಿಷೇಕ, ಪೂಜೆ ನೆರವೇರಿಸಲಾಗುವುದು.

ಸೂರ್ಯರಶ್ಮಿ ಶಿವಲಿಂಗಕ್ಕೆ ಸ್ಪರ್ಶಿಸುವ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ಹೊರಗೆ ಬೃಹತ್‌ ಎಲ್‌ ಇ ಡಿ ಪರದೆಗಳನ್ನು ಅಳವಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read