HomeKarnatakaBREAKING NEWS: ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ | Surpur Congress MLA...

BREAKING NEWS: ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ | Surpur Congress MLA Raja Venkatappa Nayaka Passed Away

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಂಡಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದಾರೆ.

ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular