HomeKarnatakaBIG NEWS: ಹೆಚ್.ಡಿ. ರೇವಣ್ಣ ಬಂಧನದ ಬೆನ್ನಲ್ಲೇ ಎಸ್ಐಟಿ ಎದುರು ಪ್ರಜ್ವಲ್ ಶರಣಾಗುವ ಸಾಧ್ಯತೆ

BIG NEWS: ಹೆಚ್.ಡಿ. ರೇವಣ್ಣ ಬಂಧನದ ಬೆನ್ನಲ್ಲೇ ಎಸ್ಐಟಿ ಎದುರು ಪ್ರಜ್ವಲ್ ಶರಣಾಗುವ ಸಾಧ್ಯತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ.

ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಕೂಡ ಎಸ್ಐಟಿ ಎದುರು ಶರಣಾಗುವ ಸಾಧ್ಯತೆ ಇದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಎಸ್ಐಟಿ ಎದುರು ಶರಣಾಗಲಿದ್ದಾರೆ ಎನ್ನಲಾಗಿದೆ.

ರೇವಣ್ಣ ಬಂಧನ ಬಳಿಕ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅವರು, ಜಾಮೀನು ಅರ್ಜಿ ವಜಾಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ಎಸ್ಐಟಿ ಮುಂದೆ ರೇವಣ್ಣ ಸರೆಂಡರ್ ಆಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಕೂಡ ಸರೆಂಡರ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular