ರಾಜ್ಯದಲ್ಲಿ ಬಿಜೆಪಿಗೆ 20 ಸ್ಥಾನ: ಕೇಂದ್ರದಲ್ಲಿ ಮತ್ತೆ NDA ಸರ್ಕಾರ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಪೂರ್ವ ತಯಾರಿ ಮಾಡಿಕೊಂಡಿವೆ. ಇದೀಗ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್.ಡಿ.ಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪ್ರಬಲ ಸ್ಪರ್ಧೆ ನೀಡಿದರೂ 175 ಸ್ಥಾನಗಳನ್ನು ಗಳಿಸಬಹುದು. ಸಮೀಕ್ಷೆಯ ಪ್ರಕಾರ ಎನ್.ಡಿ.ಎ. 307 ಸ್ಥಾನ, ಇತರರು 61 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಟೈಮ್ಸ್ ನೌ -ಇಟಿಜಿ ರಿಸರ್ಚ್ ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.

ಬಹುತೇಕ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 18ರಿಂದ 20 ಸ್ಥಾನ, ಕಾಂಗ್ರೆಸ್ 7-9 ಸ್ಥಾನ, ಜೆಡಿಎಸ್ 0-1 ಸ್ಥಾನ ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read