BREAKING : ಪೊಲೀಸ್ ಬಿಗಿ ಭದ್ರತೆಯೊಂದಿಗೆ ‘ಜ್ಞಾನವ್ಯಾಪಿ’ ಮಸೀದಿ ಸರ್ವೆ ಕಾರ್ಯ ಆರಂಭ

ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ಹಿನ್ನೆಲೆ ಇಂದಿನಿಂದ  ಜ್ಞಾನವ್ಯಾಪಿ ಮಸೀದಿಯಲ್ಲಿ  ಸರ್ವೆ ಕಾರ್ಯ ಆರಂಭವಾಗಿದೆ. ಮುಂಜಾಗೃತಾ ಕ್ರಮವಾಗಿ  ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ವಾರಣಾಸಿ ಕಮಿಷನರ್ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.  ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.  ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಅಂಜುಮನ್ ಇಂಟೆಝಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಇತ್ತೀಚೆಗೆ  ತಾತ್ಕಾಲಿಕ ತಡೆ ನೀಡಿತ್ತು.  ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿತ್ತು, ಜುಲೈ 27ರಂದು ನಡೆದ ವಿಚಾರಣೆ ವೇಳೆ ಸರ್ವಪಕ್ಷಗಳ ವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿ ಮುಂದಿನ ಆದೇಶದವರೆಗೆ ಎಎಸ್‌ಐ ಸಮೀಕ್ಷೆಗೆ ತಡೆ ನೀಡಿತ್ತು.ನಿನ್ನೆ  ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಕೋರ್ಟ್ ತೀರ್ಪು ಪ್ರಕಟಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read