HomeLatest Newsಸೂರ್ಯ ಕುಮಾರ್ ಭರ್ಜರಿ ಶತಕ, ಕುಲದೀಪ್ ಗೆ 5 ವಿಕೆಟ್: 3ನೇ ಟಿ20ಯಲ್ಲಿ ಭಾರತಕ್ಕೆ 106...

ಸೂರ್ಯ ಕುಮಾರ್ ಭರ್ಜರಿ ಶತಕ, ಕುಲದೀಪ್ ಗೆ 5 ವಿಕೆಟ್: 3ನೇ ಟಿ20ಯಲ್ಲಿ ಭಾರತಕ್ಕೆ 106 ರನ್ ಜಯ

ಜೋಹಾನ್ಸ್ ಬರ್ಗ್: ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ, ಕುಲದೀಪ್ ಯಾದವ್ ಸ್ಪಿನ್ ದಾಳಿ ನೆರವಿನಿಂದ ಭಾರತ ತಂಡ ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 106 ರನ್ ಗಳಿಂದ ಜಯಗಳಿಸಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ರಿಂದ ಸಮಬಲ ಸಾಧಿಸಿವೆ. ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ ಗಳಿಂದ ಜಯಗಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೋಹಾನ್ಸ್ ಬರ್ಗ್ ನ ದಿ ವಾಂಡರರ್ಸ್ಸ್ಟೇಡಿಯಂನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಸೂರ್ಯ ಕುಮಾರ್ 100, ಯಶಸ್ವಿ ಜೈಸ್ವಾಲ್ 60 ರನ್ ಗಳಿಸಿದರು. ಭಾರತ 20 ಓವರ್ ಗಳಲ್ಲಿ 7 ವಿಕೆಟ್ ಗೆ 201 ರನ್ ಗಳಿಸಿತು.

ಸವಾಲಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಭಾರತದ ಸ್ಪಿನ್ ದಾಳಿಗೆ ತತ್ತರಿಸಿ 13.5 ಓವರ್ ಗಳಲ್ಲಿ 95 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಕುಲದೀಪ್ ಯಾದವ್ 17 ರನ್ ಗೆ 5 ವಿಕೆಟ್, ರವೀಂದ್ರ ಜಡೇಜಾ 2 ವಿಕೆಟ್, ಮುಕೇಶ್ ಕುಮಾರ್, ಅರ್ಶ್ ದೀಪ್ ತಲಾ ಒಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular