HomeIndiaತೆಲಂಗಾಣದ ಸೂರ್ಯಪೇಟೆಯಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ, 6 ಸಾವು, ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆಯಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ, 6 ಸಾವು, ಹಲವರಿಗೆ ಗಾಯ

ಹೈದರಾಬಾದ್- ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಡಜನ್‌ಗಟ್ಟಲೆ ಪ್ರಯಾಣಿಕರು ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಎಲೆಕ್ಟ್ರಿಕ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ವಿವರಗಳು

ಸ್ಥಳದಲ್ಲೇ ಹಾಗೂ ಆಸ್ಪತ್ರೆಯಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ‘ಫ್ರೆಶ್ ಬಸ್’ ನಲ್ಲಿ ಒಟ್ಟು 43 ಪ್ರಯಾಣಿಕರಿದ್ದರು

ಹೈದರಾಬಾದ್‌ನಿಂದ ವಿಜಯವಾಡ ಮಾರ್ಗವಾಗಿ ಚಲಿಸುತ್ತಿದ್ದ ‘ಫ್ರೆಶ್ ಬಸ್’ ಎಲೆಕ್ಟ್ರಿಕ್ ವಾಹನವಾಗಿದ್ದು, ಸೂರ್ಯಪೇಟೆ ಜಿಲ್ಲೆಯ ದುರ್ಗಾಪುರಂ ಹಾಗೂ ದ್ವಾರಕುಂಟ್ ಸ್ಟೇಜ್ ಬಳಿ ಬರುತ್ತಿದ್ದಂತೆ ಮುಂಭಾಗದಲ್ಲಿ ಚಲಿಸುತ್ತಿದ್ದ ಕಂಟೇನರ್ ಟ್ರಕ್‌ಗೆ ಅನಿರೀಕ್ಷಿತವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಮೃತಪಟ್ಟವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಿಎಂ ರೆಡ್ಡಿಯವರ ಪ್ರತಿಕ್ರಿಯೆ

ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ

ಸೂರ್ಯಪೇಟೆಯಲ್ಲಿ ಸಂಭವಿಸಿದ ಈ ದುರ್ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತೀವ್ರ ಆಘಾತ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಮತ್ತು ಸಂತ್ರಸ್ತರಿಗೆ ಸರ್ಕಾರದ ಎಲ್ಲಾ ರೀತಿಯ ನೆರವು ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಮತ್ತು ಸ್ಥಳೀಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular