ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಹತ್ವಕಾಂಕ್ಷಿ ಸೂರ್ಯಯಾನ ಯಶಸ್ವಿ ಉಡಾವಣೆಯಾಗಿದ್ದು, ಇದೀಗ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆ ಬಾಹ್ಯಾಕಾಶದಿಂದ ಸೆಲ್ಫಿ ಹಂಚಿಕೊಂಡಿದೆ, ಭೂಮಿ, ಚಂದ್ರನನ್ನು ಸೆರೆಹಿಡಿದಿದೆ.
ಟ್ವೀಟರ್ ನಲ್ಲಿ ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ಲ್ಯಾಗ್ರೇಂಜ್ ಪಾಯಿಂಟ್ 1 ಗೆ ಪ್ರಯಾಣಿಸುವ ಮೊದಲು ಗ್ರಹದ ಸುತ್ತಲೂ ಸುತ್ತುತ್ತಿರುವಾಗ ತನ್ನದೇ ಆದ ಸೆಲ್ಫಿಯೊಂದಿಗೆ ಭೂಮಿ ಮತ್ತು ಸೂರ್ಯನನ್ನು ಸೆರೆಹಿಡಿದಿದೆ.
Aditya-L1 Mission:
👀Onlooker!Aditya-L1,
destined for the Sun-Earth L1 point,
takes a selfie and
images of the Earth and the Moon.#AdityaL1 pic.twitter.com/54KxrfYSwy— ISRO (@isro) September 7, 2023

