ವಿಜಯಪುರ: ರೌಡಿಶೀಟರ್ ಸುಶೀಲ್ ಕಾಳೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಸುಶೀಲ್ ಕಾಳೆ ಹತ್ಯೆ ಪ್ರಕರಣದಲ್ಲಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಗೌತಮ್ ಆಲಮೇಲಕರ, ನಾರಾಯಣ ಜಾಧವ್, ಬಸವರಾಜ್ ಮುನ್ನಾಳ್, ಪ್ರಜ್ವಲ್ ಹಳಿಮನಿ ಬಂಧಿತ ಆರೋಪಿಗಳು.
ಈ ಮೊದಲು ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಜು.14ರಂದು ವಿಜಯಪುರದ ಎಸ್.ಎಸ್ ಕಾಂಪ್ಲೆಕ್ಸ್ ನಲ್ಲಿ ಬ್ ಸುಶೀಲ್ ಕಾಲೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಹತ್ಯೆಯ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು.