ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ನಕ್ಸಲರ ಕರೆ

ವಯನಾಡು(ಕೇರಳ): ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಶಂಕಿತ ಮಾವೋವಾದಿಗಳು ಕರೆ ನೀಡಿದ್ದಾರೆ.

ಬುಧವಾರ ಬೆಳಗ್ಗೆ 6.15 ರ ಸುಮಾರಿಗೆ ಶಸ್ತ್ರಸಹಿತರಾಗಿ ಬಂದಿದ್ದ ನಾಲ್ವರು ಮಾವೋವಾದಿಗಳು ತಳಪ್ಪುಳ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಮಾಲ ಪ್ರದೇಶದಲ್ಲಿ ಸ್ಥಳೀಯರನ್ನು ಭೇಟಿಯಾಗಿ ಚುನಾವಣೆ ಬಹಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.

ಸಿ.ಪಿ. ಮೊಯ್ದೀನ್ ನೇತೃತ್ವದಲ್ಲಿ ಇಬ್ಬರು ಶಸ್ತ್ರಧಾರಿಗಳ ಸಹಿತ ನಾಲ್ವರು ನಕ್ಸಲರು ಕಾಣಿಸಿಕೊಂಡಿದ್ದು, ಚುನಾವಣೆಯಲ್ಲಿ ಮತದಾನ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಚುನಾವಣೆ ಬಹಿಷ್ಕರಿಸಿ ಎಂದು ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ. ಸುಮಾರು 20 ನಿಮಿಷ ಸ್ಥಳೀಯರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಸ್ಥಳೀಯರೊಂದಿಗೆ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಮತ್ತೆ ಕಾಡಿನತ್ತ ತೆರಳಿದ್ದಾರೆ.

ಮಕ್ಕಿಮಲ ಅರಣ್ಯ ಪ್ರದೇಶಕ್ಕೆ ಮರಳಿದ ನಕ್ಸಲರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಏಪ್ರಿಲ್ 26ರ ಶುಕ್ರವಾರ ವಯನಾಡು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read