ಬೆಂಗಳೂರು: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಶಂಕಿತ ಉಗ್ರ ಮೊಹಮ್ಮದ್ ಅರ್ಷದ್ ಖಾನ್ (Arshad Khan) ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಮತ್ತೆ ವಶಕ್ಕೆ ಪಡೆದಿದ್ದಾರೆ.
ಅರ್ಷದ್ ಖಾನ್ ಈ ಹಿಂದೆ ಬೆಂಗಳೂರಿನಲ್ಲಿ ಉಗ್ರ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿತನಾಗಿದ್ದ. ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಅರ್ಷದ್ ಖಾನ್, ಜಾಮೀನು ನಿಯಮಗಳನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಎನ್ ಐ ಎ ನ್ಯಾಯಾಲಯದ ಆದೇಶ: ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐ ಎ (NIA) ವಿಶೇಷ ನ್ಯಾಯಾಲಯವು ಆರೋಪಿಯ ಜಾಮೀನು ರದ್ದುಪಡಿಸಿ, ಆತನನ್ನು ಕೂಡಲೇ ಬಂಧಿಸಿ ಹಾಜರುಪಡಿಸುವಂತೆ ಆದೇಶ ನೀಡಿತ್ತು. ಎನ್ ಐ ಎ ನ್ಯಾಯಾಲಯದ ಕಟ್ಟುನಿಟ್ಟಿನ ಆದೇಶದನ್ವಯ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಬೆಂಗಳೂರಿನಲ್ಲಿ ಅರ್ಷದ್ ಖಾನ್ ಅಡಗುತಾಣದ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.ಗ್ರೆನೇಡ್ ಸಿಕ್ಕಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಅರ್ಷದ್ ಖಾನ್ ನನ್ನು ಬಂಧಿಸಿದ್ದರು. ನಂತರ ಈ ಕೇಸ್ ಎನ್ಐಗೆ ವರ್ಗಾವಣೆಯಾಗಿತ್ತು.

