ಸಿಎಂ ಬಟನ್ ಒತ್ತಿದಾಗ ಚಾಲನೆಯಾಗದ ಯಂತ್ರ: ಹಿರಿಯ ಅಧಿಕಾರಿ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ವೇಳೆ ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೈಸೂರಿನ ಚೆಸ್ಕಾಂ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹಾಜರಿಲ್ಲದೆ ಕರ್ತವ್ಯ ಲೋಪಸಗಿದ, ಶಿಷ್ಟಾಚಾರ ಉಲ್ಲಂಘಿಸಿದ ಮತ್ತು ಮುಜುಗರಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಶ್ರೀಧರ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ.

ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳುಸೋಗೆ ಸಮೀಪ ಕಾವೇರಿ ನದಿಯಿಂದ ನೀರು ಎತ್ತಿ 79 ಗ್ರಾಮಗಳ 150 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಅವರು ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿರಲಿಲ್ಲ. ಇದರಿಂದ ಮುಜುಗರಕ್ಕೆ ಒಳಗಾಗಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡಿದ್ದರು.

ಕರ್ತವ್ಯದಲ್ಲಿ ಅಸಡ್ಡೆ, ನಿರ್ಲಕ್ಷ್ಯದಿಂದ ಸರ್ಕಾರವನ್ನು ಮುಜುಗರಕ್ಕೆ ಒಳಪಡುವಂತೆ ನೇರ ಕಾರಣವಾದ್ದರಿಂದ ಶ್ರೀಧರ್ ವಿರುದ್ಧ ಕ್ರಮ ಜರುಗಿಸಿ ಅಮಾನತು ಮಾಡಲಾಗಿದೆ. ಅವರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read