HomeKarnatakaಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ.

ಸೇಡಂ ತಾಲೂಕಿನ ಮುಧೋಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಸವರಾಜ ಮತ್ತು ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿ.ಆರ್.ಸಿ. ಶಂಕರಲಿಂಗಪ್ಪ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಅಮಾನತುಗೊಳಿಸಿದ್ದಾರೆ. ಸಹಾಯಕ ಚುನಾವಣಾ ಅಧಿಕಾರಿಯ ಅನುಮತಿ ಪಡೆಯದೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಇವರನ್ನು ಸ್ಟ್ಯಾಟಿಕ್ ಸರ್ವೇಲೆನ್ಸ್ ಟೀಮ್ ತಂಡದಲ್ಲಿ ನಿಯೋಜಿಸಲಾಗಿತ್ತು. ಪೂರ್ವಾನುಮತಿ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular