HomeKarnatakaBREAKING: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ, ಎಸ್ಐ ಅಮಾನತು

BREAKING: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ, ಎಸ್ಐ ಅಮಾನತು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಿ ಆರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular