HomeKarnatakaBIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು...

BIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಿಟಿಜನ್ ಪೋರ್ಟಲ್ ಮೂಲಕ ಸಲ್ಲಿಕೆಯಾದ ಬೇಡಿಕೆಗಳ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ. 4.85 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, 3.60 ಲಕ್ಷ  ಶೌಚಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತು.

ಈ ಅನುದಾನವನ್ನು ನಿಗದಿತ ಅವಧಿ ಒಳಗೆ ಖರ್ಚು ಮಾಡದ ಪಿಡಿಒಗಳನ್ನು ಅಮಾನತು ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ 30 ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪತ್ರ ಬರೆದಿದೆ. ಗ್ರಾಮೀಣ ಭಾಗದ ಮನೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 7200 ರೂ., ರಾಜ್ಯ ಸರ್ಕಾರ 4800 ಸೇರಿ 12,000 ರೂ. ಸಹಾಯಧನ ನೀಡುತ್ತವೆ. ಪರಿಶಿಷ್ಟ ಜಾತಿ, ಪಂಗಡದ ಕುಟುಂಬಗಳಿಗೆ 15,000 ರೂ. ಸಹಾಯಧನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

318 ಪಂಚಾಯಿತಿಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಒಂದು ಶೌಚಾಲಯವನ್ನು ನಿರ್ಮಿಸದೆ ಅನುದಾನವನ್ನು ಹಾಗೆಯೇ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕ್ರಮಕ್ಕೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular