HomeKarnatakaಅಕ್ರಮವಾಗಿ 126 ಮರ ಕಡಿದ ಪ್ರಕರಣ: ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಅಕ್ರಮವಾಗಿ 126 ಮರ ಕಡಿದ ಪ್ರಕರಣ: ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರಲ್ಲಿ ಅಕ್ರಮವಾಗಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್ ಅವರನ್ನು ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

ಅನುಮತಿ ಇಲ್ಲದೆ ಮರ ಕಡಿಯುವುದು ಅಪರಾಧವಾಗಿದ್ದರೂ, ಸರ್ಕಾರಿ ಜಮೀನಿನಲ್ಲಿ 126 ಮರಗಳನ್ನು ಕಡಿಯಲಾಗಿದೆ. ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಮನಕ್ಕೆ ಇದು ಬಾರದಿರುವುದು ಕರ್ತವ್ಯ ಲೋಪಕ್ಕೆ ಸಾಕ್ಷಿಯಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಉಪ ವಿಭಾಗದ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಬಿರಾದಾರ, ಬೇಲೂರು ವಲಯ ಅರಣ್ಯ ಅಧಿಕಾರಿ ವಿನಯಕುಮಾರ್, ಉಪವಲಯ ಅರಣ್ಯ ಅಧಿಕಾರಿ ಗುರುರಾಜ್, ಅರಣ್ಯ ಗಸ್ತು ಪಾಲಕ ರಘುಕುಮಾರ್ ಅವರನ್ನು ಗುರುವಾರ ಅಮಾನತು ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular