HomeKarnatakaವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್: ಪ್ರಾಂಶುಪಾಲ ಸಸ್ಪೆಂಡ್

ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್: ಪ್ರಾಂಶುಪಾಲ ಸಸ್ಪೆಂಡ್

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಲೈಂಗಿಕ ಕಿರುಕುಳ ನೀಡಿದ ಆರೋಪ ಮತ್ತು ಎರಡನೇ ಮದುವೆಯಾದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಎರಡನೇ ಪತ್ನಿಯೊಂದಿಗೆ ಸಿದ್ದಪ್ಪ ಇರುವ ಫೋಟೋ ಜಾಲತಾಣಗಳಲ್ಲಿ ಹರಿದಾಡಿವೆ. ಅಲ್ಲದೇ ಸಿದ್ದಪ್ಪ ವಿದ್ಯಾರ್ಥಿನಿಯರೊಂದಿಗೆ ಇರುವ ಫೋಟೋ, ವಿಡಿಯೋ, ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಡಿಡಿಪಿಯು ಸೋಮಶೇಖರ ಹೊಕ್ರಾಣಿ ನೇತೃತ್ವದ ತ್ರಿಸದಸ್ಯ ಸಮಿತಿ ರಚಿಸಿ  ತನಿಖೆಗೆ ಆದೇಶ ನೀಡಲಾಗಿತ್ತು. ಈ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿ ರಾಜ್ಯ ನಿರ್ದೇಶಕರಿಗೆ ಪ್ರಾಥಮಿಕ ವರದಿ ನೀಡಿದ್ದು, ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರು ಲೈಂಗಿಕ ಕಿರುಕುಳ ನೀಡಿದ ಮತ್ತು ಎರಡನೇ ಮದುವೆಯಾದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ಕಾಯ್ದಿರಿಸಿ ಅವರನ್ನು ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular