HomeKarnatakaBREAKING: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಸಸ್ಪೆಂಡ್

BREAKING: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಕಾಟನ್ ಪೇಟೆ ಇನ್ಸ್ ಪೆಕ್ಟರ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಡಿಜಿ ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರು ದಾಖಲಿಸಿ ಜೈಲು ಸೇರಲು ಸಹಕರಿಸಿದ ಆರೋಪ ಕೇಳಿ ಬಂದಿತ್ತು.  ಪ್ರಕರಣದ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರೋಡೆ ಪ್ರಕರಣದಲ್ಲಿ ಪಾತ್ರವಿಲ್ಲದಿದ್ದರೂ ವಂಚಕ ಸ್ಯಾಂಟ್ರೋ ರವಿಯ ಪತ್ನಿ ಮತ್ತು ಆಕೆಯ ಸೋದರ ಸಂಬಂಧಿ ಮಹಿಳೆಯನ್ನು ಅಕ್ರಮವಾಗಿ ಬಂಧಿಸಿ ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಕಾಟನ್ ಪೇಟೆ ಠಾಣೆ ಇನ್ಸ್ ಪೆಕ್ಟರ್ ಪ್ರವೀಣ್ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆ ಇನ್ಸ್ಪೆಕ್ಟರ್ ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular