ಹಾವೇರಿ: ಅಕ್ರಮ ಸಂಬಂಧದ ಶಂಕೆಯಿಂದ ಪತ್ನಿಯನ್ನು ಕೊಲೆ ಮಾಡಿದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ನಜೀಕಲಾಕಮಾಪುರ ಗ್ರಾಮದಲ್ಲಿ ನಡೆದಿದೆ.
ನಜೀಕಲಕಮಾಪುರ ನಿವಾಸಿ ಲಲಿತ(55) ಕೊಲೆಯಾದ ಮಹಿಳೆ. ಸಿದ್ದಪ್ಪ ಡಬ್ಬಣ್ಣನವರ(60) ಪತ್ನಿಯನ್ನು ಕೊಲೆ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮದ್ಯವ್ಯಸನಿಯಾಗಿದ್ದ ಸಿದ್ದಪ್ಪ ಪತ್ನಿಯ ಜೊತೆಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ ಕಟ್ಟಿಗೆಯಿಂದ ತಲೆಗೆ ಹೊಡೆದು ಪತ್ನಿ ಕೊಲೆ ಮಾಡಿ ನಂತರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.