ಬಾಗಲಕೋಟೆ : ಬಾಗಲಕೋಟೆಯ ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಬಾಗಲಕೋಟೆ ತಾಲೂಕಿನ ಬೀಳಗಿ ತಾಲೂಕಿನ ಸುನಗ ತಾಂಡದ ಸೀಮಾ ರಾಠೋಡ (21) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಈಕೆ ಕಾಲೇಜೊಂದರಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದಳು. ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
You Might Also Like
TAGGED:ಪಿಜಿ