ಬೆಳಗಾವಿ: ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ 25 ವರ್ಷದ ಅನಿತಾ ನೀಲದಕರ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅನಿತಾ ಅವರ ಪತಿ ನೀಲೇಶ್ ನನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅನಿತಾ ಮತ್ತು ನೀಲೇಶ್ ಪರಸ್ಪರ ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅನಿತಾ ಶವ ಪತ್ತೆಯಾಗಿದೆ. ಪತಿ ನೀಲೇಶ್ ಮತ್ತು ಆತನ ಮನೆಯವರು ಅನಿತಾ ಕೊಲೆ ಮಾಡಿರುವುದಾಗಿ ಆರೋಪಿಸಿ ಅನಿತಾ ಪೋಷಕರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನೀಲಶ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.