ಬೆಂಗಳೂರು : ಬೆಂಗಳೂರಿನಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಓರ್ವ ಬಾಲಕ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 10 ಕ್ಕೂ ಹೆಚ್ಚು ಮನೆ ಧ್ವಂಸಗೊಂಡಿದೆ.
ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಪೋಟದ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ.ಘಟನೆಯಲ್ಲಿ ಒಟ್ಟು 7 ಮಂದಿ ಗಾಯಗೊಂಡಿದ್ದರೆ ಎಂದು ಹೇಳಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.