ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಮೂರು ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಸಂಭವಿಸಿದೆ.
ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಕ್ಷೇತ್ರದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ತೆರಳುತ್ತಿದ್ದ ವೇಳೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡಿದ್ದಾರೆ. ಸುತ್ತೂರು ಕ್ಷೇತ್ರಕ್ಕೆ ತೆರಳುವ ಮಾರ್ಗದಲ್ಲಿ ಮೂರು ಕಿ.ಮಿ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಜನರು, ರಾಜಕಾರಣಿಗಳು ಒದ್ದಾಡಿದ್ದಾರೆ. ಇದೇ ವೇಳೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೂಡ ಸಂಚಾರದಟ್ಟಣೆಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.
ಸಂಚಾರ ದಟ್ಟಣೆ ನಿಯಂತ್ರಿಸಲು ಸ್ವತಃ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ. ಟ್ರಾಫಿಕ್ ಜಾಮ್ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ದಾರಿ ಮಾಡಿ ಕೊಡಲು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸಪಟ್ಟಿದ್ದಾರೆ. ಇದೇ ವೇಳೆ ಬೈಕ್ ಒಂದೆಡೆ ಬಸ್ ಮತ್ತೊಂದೆಡೆ ಬಕ್ ಸವಾರ ಮುನ್ನುಗ್ಗುತ್ತಿದ್ದಂತೆ ಕೋಪಗೊಂಡ ಎಸ್ ಪಿ ಬೈಕ್ ಸವಾರನಿಗೆ ಕಾಲಿನಿಂದ ಒದೆಯಲು ಮುಂದಾಗಿರುವ ಘಟನೆ ನಡೆದಿದೆ.

