ಇನ್ಮುಂದೆ ವರ್ಷಪೂರ್ತಿ ಜಗಮಗಿಸಲಿದೆ ‘ಸುವರ್ಣಸೌಧ’ : ಶಾಶ್ವತ ‘ವಿದ್ಯುತ್ ದೀಪಾಲಂಕಾರಕ್ಕೆ’ ಸಿಎಂ ಚಾಲನೆ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಉದ್ಘಾಟಿಸಿದರು.

ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿ ಹಲವು ಸಚಿವರು ಮತ್ತು ಎಲ್ಲಾ ಶಾಸಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ಇದುವರೆಗೂ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಸುವರ್ಣಸೌಧ ಜಗಮಗಿಸಲಿದೆ.

https://twitter.com/CMofKarnataka/status/1731705164149448728

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read