BIG NEWS: ಸ್ವಚ್ಛತೀರ್ಥ ಅಭಿಯಾನ: ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ದೇವಾಲಯಗಳು ಹಾಗೂ ದೇವಾಲಯಗಳ ಸುತ್ತಮುತ್ತ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೀರ್ಥ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ ಸ್ವಚ್ಛತೆ ಮಾಡಿ ಸೇವೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಶ್ರೀ ಸಿದ್ದಪ್ಪಾಜಿ ಮೂಲ ಗದ್ದುಗೆ ಮಠದ ಆವರಣದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ಪ್ರಹ್ಲಾದ್ ಜೋಶಿ ತಮ್ಮ ಸೇವೆ ಸಲ್ಲಿಸಿದರು.

ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಸಂತೋಷ್ ಚೌವ್ಹಾಣ್, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಕೂಡ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದರು.

ರಾಮ ಮಂದಿರ ಉದ್ಘಾಟನೆಯವರೆಗೆ ಬಿಜೆಪಿ ಕಾರ್ಯಕರ್ತರು ಪ್ರತಿದಿನ ರಾಜ್ಯದ ವಿವಿಧ ದೇವಾಲಯಗಳಲ್ಲಿ ಭಜನೆ, ಕೀರ್ತನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read