ವಿಜಯಪುರ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ಖಂಡಿಸಿ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ.
ಹೈಕಮಾಂಡ್ ನಾಯಕರ ಗಮನ ಸೆಳೆಯಲು ನಿರ್ಧರಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಹೋರಾಟಕ್ಕೆ ಸ್ವಾಮೀಜಿ ಕರೆ ನೀಡಿದ್ದಾರೆ.
ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ವಿರೋಧಿಸಿ ಮೇ 11ರಂದು ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ವಿಜಯಪುರ ನಗರದಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿರಾಟ್ ರಾಷ್ಟ್ರೀಯ ರ್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸುಮಾರು 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಸಮರ ಸಾರಿದ್ದು, ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.