HomeLatest Newsರಾಜ್ಯ ಸರ್ಕಾರದ ಮತ್ತೊಂದು ಎಡವಟ್ಟು: ಸ್ವಾಮೀಜಿಗೂ ಬಡ್ತಿ ಭಾಗ್ಯ ನೀಡಿ ಆದೇಶ

ರಾಜ್ಯ ಸರ್ಕಾರದ ಮತ್ತೊಂದು ಎಡವಟ್ಟು: ಸ್ವಾಮೀಜಿಗೂ ಬಡ್ತಿ ಭಾಗ್ಯ ನೀಡಿ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಎಡವಟ್ಟು ಮಾಡಿದೆ. ಕೆ.ಎ.ಎಸ್.ಅಧಿಕಾರಿಗಳಿಗೆ ಬಡ್ತಿ ನೀಡುವ ವೇಳೆ ಸ್ವಯಂ ನಿವೃತ್ತಿ ಪಡೆದು ಪ್ರಸ್ತುತ ಸ್ವಾಮೀಜಿಯಾಗಿರುವವರಿಗೂ ಬಡ್ತಿ ನೀಡಿ ಆದೇಶ ಹೊರಡಿಸಿದೆ.

ಹೆಚ್.ಎಲ್.ನಾಗರಾಜ್ ಸ್ವಯಂ ನಿವೃತ್ತಿ ಪಡೆದು ನಿಶ್ಚಲಾನಂದ ಸ್ವಾಮೀಜಿಯಾಗಿದ್ದು, ಸರ್ಕಾರದ ಆದೇಶದಲ್ಲಿ ಅವರಿಗೂ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಈ ನಡೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಸರ್ಕಾರ ಇತ್ತೀಚ್ರೆಗೆ ೨೦ ಕೆ.ಎ.ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿಪಡೆದಿರುವ ಹೆಚ್.ಎಲ್.ನಾಗರಾಜ್ ಅವರ ಹೆಸರೂ ಇದೆ. ಇದು ಆಡಳಿತಾತ್ಮಕ ಎಡವಟ್ಟು ಎಂದು ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಎಲ್.ನಾಗರಾಜ್ ಅವರು ಸೇವೆಯಿಂದ ನಿವೃತ್ತಿ ಪಡೆದು ಸನ್ಯಾಸ ಸ್ವೀಕರಿಸಿ ನಿಶ್ಚಲಾನಂದ ಸ್ವಾಮೀಜಿಯಾಗಿ ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ. ಇದು ಭಾರಿ ಟೀಕೆಗೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕರು ಇದನೇ ಅಸ್ತ್ರವಾಗಿ ಬಳಸಿಕೊಂಡು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular