ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಣೇಹಳ್ಳಿಯ ಗುರುಪಾದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಪವನ್ ಬೈಕ್ ನಲ್ಲಿ ತೆರಳುವಾಗ ಪಾಳೇದಹಳ್ಳಿ -ಶೆಟ್ಟಿಹಳ್ಳಿ ಗೇಟ್ ಸಮೀಪ ಬಿದ್ದು ಇತ್ತೀಚೆಗೆ ಮೃತಪಟ್ಟಿದ್ದರು. ಈ ಬಗ್ಗೆ ಹೊಸದುರ್ಗ ಠಾಣೆಯಲ್ಲಿ ಅ. 4ರಂದು ಪ್ರಕರಣ ದಾಖಲಾಗಿತ್ತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಯ ಸಾವನ್ನು ಸಾಣೇಹಳ್ಳಿಯ ಮಠದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ, ಗುಟ್ಟು ಬಿಟ್ಟುಕೊಡದ ಸ್ವಾಮೀಜಿಗಳು, ಹೊಸದುರ್ಗ ಪೊಲೀಸರು ಮತ್ತು ಶಾಸಕ ಬಿ.ಜಿ. ಗೋವಿಂದಪ್ಪ, ವಿದ್ಯಾರ್ಥಿಯ ಸಾವಿನಲ್ಲಿ ಸ್ವಾಮೀಜಿ ಮತ್ತು ಶಿಕ್ಷಕರ ಕೈವಾಡವಿದೆ. ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇಲ್ಲದಿದ್ದರೆ ಮಠಕ್ಕೆ ಬೀಗ ಹಾಕಲಾಗುವುದು ಎಂದು ಬರೆದು ಮೋಹನ್ ಬಾಬು ಅಲಿಯಾಸ್ ಮೋಹನ್ ಕುಮಾರ್ ಎಂಬುವರ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read