ಕಾಮದ ಮದದಲ್ಲಿ ಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಎಲ್ಲರೆದುರಲ್ಲೇ ಹಸ್ತಮೈಥುನ; ಕಿಡಿಗೇಡಿ ವಿರುದ್ಧ ಕ್ರಮಕ್ಕೆ ಸೂಚನೆ

ದೆಹಲಿ ಮೆಟ್ರೋದಲ್ಲಿ ಕಾಮುಕನೊಬ್ಬ ಎಲ್ಲರೆದುರಲ್ಲೇ ಹಸ್ತಮೈಥುನ ಮಾಡಿಕೊಂಡ ಘಟನೆ ನಡೆದಿದ್ದು, ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಕ್ರಮಕ್ಕೆ ಸೂಚಿಸಿದ್ದಾರೆ.

ಸ್ವಾತಿ ಮಲಿವಾಲ್ ಅವರು ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದು, ಅವನ ಸುತ್ತಲಿನ ಇತರರು ಮುಜುಗರದಿಂದ ದೂರ ಸರಿದಿದ್ದಾರೆ.

ನಾಚಿಕೆಗೇಡಿನ ಕೃತ್ಯಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ನೀಡಿರುವುದಾಗಿ ಟ್ವಿಟರ್‌ನಲ್ಲಿ ಮಲಿವಾಲ್ ಹೇಳಿದ್ದಾರೆ.

ದೆಹಲಿ ಮೆಟ್ರೋದಲ್ಲಿ ವ್ಯಕ್ತಿಯೊಬ್ಬರು ನಾಚಿಕೆಯಿಲ್ಲದೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೈರಲ್ ವೀಡಿಯೊ ಗಮನಿಸಿದೆ. ಇದು ಸಂಪೂರ್ಣವಾಗಿ ಅಸಹ್ಯಕರ ಮತ್ತು ಅನಾರೋಗ್ಯಕರವಾಗಿದೆ. ಈ ನಾಚಿಕೆಗೇಡಿನ ಕೃತ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಖಚಿತಪಡಿಸಿಕೊಳ್ಳಲು ನಾನು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ನೀಡುತ್ತಿದ್ದೇನೆ ಎಂದು ಮಲಿವಾಲ್ ಟ್ವೀಟ್ ಮಾಡಿದ್ದಾರೆ.

ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಮೊಬೈಲ್ ಫೋನ್‌ ನಲ್ಲಿ ಏನನ್ನೋ ನೋಡುತ್ತಾ ಉದ್ದೇಶಪೂರ್ವಕವಾಗಿ ಹಸ್ತಮೈಥುನ ಮಾಡುವುದು ಕಂಡು ಬಂದಿದ್ದು, ಈ ಘಟನೆಯನ್ನು ಮತ್ತೊಬ್ಬ ಪ್ರಯಾಣಿಕರು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read