ಬೆಂಗಳೂರು : ಸಾರಿಗೆ ಇಲಾಖೆಯ 9 ಸಾವಿರ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಇಂದು ಕಲಬುರಗಿಯಲ್ಲಿ ಮಾತನಾಡಿದ ಸಚಿವರು ಸಾರಿಗೆ ಸಂಸ್ಥೆಯಲ್ಲಿ 13800 ನೌಕರರು ನಿವೃತ್ತಿಯಾಗಿದ್ದು, ಇದರಲ್ಲಿ 9000 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಮಾರ್ಚ್ ಅಂತ್ಯದೊಳಗೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗತ್ತದೆ, 9000 ಹುದ್ದೆಗಳಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 1688 ಹುದ್ದೆಗಳು ಸೇರಿದೆ ಎಂದರು. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಯೋಜನೆ ಜಾರಿಗೂ ಮುನ್ನ ರಾಜ್ಯದಲ್ಲಿ ಪ್ರತಿದಿನ 84 ಲಕ್ಷ ಜನರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು, ಯೋಜನೆ ಜಾರಿಗೆ ಬಂದ ಬಳಿಕ 1.10 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ ಎಂದರು.