HomeKarnatakaಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ಈಜಲು ಹೋಗಿ ಯುವಕ ಸಾವು

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ಈಜಲು ಹೋಗಿ ಯುವಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತೀಸ್ಗಢ ಮೂಲದ ಪ್ರವಾಸಿಗ ಈಜಲು ಹೋಗಿ ಮೃತಪಟ್ಟಿದ್ದಾರೆ.

ಅಮಿತ್ ಕುಮಾರ್(39) ಮೃತಪಟ್ಟ ಪ್ರವಾಸಿಗ. ಮೂಲತಃ ಛತ್ತೀಸ್ಗಢದ ಅಮಿತ್ ಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ಸ್ನೇಹಿತರೊಂದಿಗೆ ಕೆಮ್ಮಣ್ಣುಗುಂಡಿ, ಸಮೀಪದ ಹೆಬ್ಬೆ ಜಲಪಾತ ವೀಕ್ಷಣೆಗೆ ಆಗಮಿಸಿದ್ದಾರೆ.

ಜಲಪಾತ ವೀಕ್ಷಣೆ ಬಳಿಕ ಸಮೀಪದಲ್ಲಿ ಈಜಲು ಹೋಗಿದ್ದ ಅವರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ತರೀಕೆರೆ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗದಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular