HomeIndiaಜೋಕಾಲಿ ಆಡುತ್ತಿದ್ದಾಗ ದುರಂತ; ಕುತ್ತಿಗೆಗೆ ಹಗ್ಗ ಬಿಗಿದು ಬಾಲಕಿ ದುರ್ಮರಣ

ಜೋಕಾಲಿ ಆಡುತ್ತಿದ್ದಾಗ ದುರಂತ; ಕುತ್ತಿಗೆಗೆ ಹಗ್ಗ ಬಿಗಿದು ಬಾಲಕಿ ದುರ್ಮರಣ

ತಿರುವನಂತಪುರ: ಜೋಕಾಲಿ ಆಡುತ್ತಿದ್ದಾಗ ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಬಿಗಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಮಳಪ್ಪುರಂ ಜಿಲ್ಲೆಯ ಕುಟ್ಟಿಪುರಂನಲ್ಲಿ ನಡೆದಿದೆ.

ಹಯಾ ಫಾತಿಮಾ ಮೃತ ಬಾಲಕಿ. ಬಾಲಕಿ ಮನೆಯಲ್ಲಿ ಜೋಕಾಲಿ ಆಡುತ್ತಿದ್ದಳು. ಏಕಾಏಕಿ ಜೋಕಾಲಿ ಹಗ್ಗ ಕುತ್ತಿಗೆಗೆ ಸುತ್ತಿ ಬಿಗಿದುಕೊಂಡಿದೆ. ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೋಷಕರು ಬಂದು ನೋಡುವಷ್ಟರಲ್ಲಿ ಬಾಲಕಿ ಉಸಿರುಚೆಲ್ಲಿದ್ದಳು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular