ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಸ್ವಿಟ್ಜರ್ಲೆಂಡ್ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್ ನ ಕ್ರಾನ್ಸ್-ಮೊಂಟಾನಾ ನಗರದ ಬಾರ್ ನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ದುರಂತದಲ್ಲಿ 40 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸ ವರ್ಷಾಚರಣೆ ಪಾರ್ಟಿ ವೇಳೆ ಈ ದುರಂತ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಗೀತ ಕಚೇರಿ ವೇಳೆ ಪಟಾಕಿ ಸಿಡಿದು ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತನಿಖೆ ಮುಂದುವರೆದಿದೆ.

