ಮೈಸೂರು : ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ನೀಡಿದರು.
ಇದೇ ವೇಳೆ ಫಲಾನುಭವಿಗಳಿಗೆ ಡಿಜಿಟಲ್ ಕಾರ್ಡ್ ವಿತರಣೆ ಮಾಡಲಾಯಿತು. ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಡಿಜಿಟಲ್ ಕಾರ್ಡ್ ವಿತರಣೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ರಾಹುಲ್ ಗಾಂಧಿ ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ನಮ್ಮ ಗ್ಯಾರಂಟಿ ಘೋಷಣೆ ವೇಳೆ ಕೇಂದ್ರ ಸರ್ಕಾರ ಟೀಕೆ ಮಾಡಿತ್ತು. ಆದ್ರೆ ನಾವು ನುಡಿದಂತೆ ನಡೆದಿದ್ದೇವೆ ಎಂದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಲಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ. ನಾವು ಹೇಳಿದಂತೆ ರಾಜ್ಯದ ಹೆಣ್ಣು ಮಕ್ಕಳು ಉಚಿತವಾಗಿ ಶಕ್ತಿ ಯೋಜನೆ ಜಾರಿಯಾಗಿದೆ ಎಂದರು.ಈ ವೇಳೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ನ 100 ದಿನಗಳ ಯಶಸ್ವಿ ಪುಸ್ತಕ ಬಿಡುಗಡೆ ಮಾಡಿದರು.
https://twitter.com/INCKarnataka/status/1696778508062826875?ref_src=twsrc%5Etfw%7Ctwcamp%5Etweetembed%7Ctwterm%5E1696778508062826875%7Ctwgr%5Ed6163a8bb9e767487d8938008f72fa62c82ce94f%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fkarnataka-breaking-kannada-news-live-gruha-lakshmi-scheme-launch-cm-siddaramaiah-latest-news-ayb-656719.html