HomeLatest Newsಭಾರತ vs ನ್ಯೂಜಿಲೆಂಡ್ 3ನೇ ಟಿ20: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕ್ಯಾಪ್ಟನ್ ಶ್ರೇಯಸ್ ಅಯ್ಯರ್!

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕ್ಯಾಪ್ಟನ್ ಶ್ರೇಯಸ್ ಅಯ್ಯರ್!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಮಂಗಳವಾರ ವೆಲ್ಲಿಂಗ್ಟನ್‌ನ ಹೆನ್ರಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸರಣಿಯಲ್ಲಿ ಈಗಾಗಲೇ 2-0 ಮುನ್ನಡೆ ಸಾಧಿಸಿರುವ ಭಾರತ ತಂಡವು ಈ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಬಲವಾದ ನಿರೀಕ್ಷೆಯಲ್ಲಿದೆ.

ಮತ್ತೊಂದೆಡೆ, ತವರಿನಲ್ಲಿ ನಡೆಯುತ್ತಿರುವ ಈ ಸರಣಿಯಲ್ಲಿ ಸತತ ಎರಡು ಪಂದ್ಯಗಳನ್ನು ಸೋತು ಹಿನ್ನಡೆ ಅನುಭವಿಸಿರುವ ನ್ಯೂಜಿಲೆಂಡ್ ತಂಡಕ್ಕೆ ಇದು ಅತ್ಯಂತ ನಿರ್ಣಾಯಕ ಪಂದ್ಯವಾಗಿದೆ. ಸರಣಿಯಲ್ಲಿ ಜೀವಂತವಾಗಿರಲು ಹಾಗೂ ಭಾರತ 3-0 ಅಂತರದ ಮುನ್ನಡೆ ಪಡೆಯುವುದನ್ನು ತಡೆಯಲು ಕಿವೀಸ್ ಪಡೆಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಸರಣಿಯ ಮೊದಲ ಪಂದ್ಯದಲ್ಲಿ 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ 4 ವಿಕೆಟ್‌ಗಳ ಗೆಲುವು ಸಾಧಿಸಿದ್ದ ಭಾರತ, ಎರಡನೇ ಪಂದ್ಯದಲ್ಲೂ ತಿಲಕ್ ವರ್ಮಾ ಅವರ ಭರ್ಜರಿ ಅರ್ಧಶತಕದ (26 ಎಸೆತಗಳಲ್ಲಿ 51 ರನ್) ನೆರವಿನಿಂದ 181 ರನ್‌ಗಳನ್ನು ಚೇಸ್ ಮಾಡಿ 4 ವಿಕೆಟ್‌ಗಳಿಂದ ಜಯಗಳಿಸಿತ್ತು. ಇದೀಗ ಬೌಲಿಂಗ್ ವಿಭಾಗದಲ್ಲಿ ಮತ್ತಷ್ಟು ಸುಧಾರಣೆ ಕಂಡು ಕಂಡುಕೊಂಡು ಸರಣಿ ಕೈವಶ ಮಾಡಿಕೊಳ್ಳಲು ಭಾರತ ಹವಣಿಸುತ್ತಿದ್ದರೆ, ನ್ಯೂಜಿಲೆಂಡ್ ತಂಡವು ತನ್ನ ಬೌಲಿಂಗ್ ಕೊರತೆಗಳನ್ನು ಸರಿಪಡಿಸಿಕೊಂಡು ಕಂಬ್ಯಾಕ್ ಮಾಡಲು ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular