HomeLatest NewsT20 World Cup 2026: ದಕ್ಷಿಣ ಆಫ್ರಿಕಾ ನಡುಗಿಸಿದ ಅಫ್ಘಾನಿಸ್ತಾನ; ಟೂರ್ನಿಯ ಮೊದಲ ಸೂಪರ್ ಓವರ್...

T20 World Cup 2026: ದಕ್ಷಿಣ ಆಫ್ರಿಕಾ ನಡುಗಿಸಿದ ಅಫ್ಘಾನಿಸ್ತಾನ; ಟೂರ್ನಿಯ ಮೊದಲ ಸೂಪರ್ ಓವರ್ ಪಂದ್ಯ!

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 13ನೇ ಪಂದ್ಯ ನಡೆದಿದ್ದು, ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ಮುಖಾಮುಖಿಯಾಗಿದ್ದು, ಪಂದ್ಯ ಟೈ ಆಗಿ ಟೂರ್ನಿಯ ಮೊದಲ ಸೂಪರ್ ಓವರ್‌ಗೆ ಎಡೆ ಮಾಡಿಕೊಟ್ಟಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಫೀಲ್ಡಿಂಗ್ ಆರಿಸಿಕೊಂಡು ದಕ್ಷಿಣ ಆಫ್ರಿಕಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿ ಅಫ್ಘಾನಿಸ್ತಾನಕ್ಕೆ 188 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ 19.4 ಓವರ್‌ಗಳಲ್ಲಿ 187 ರನ್ ಗಳಿಸಿ ಆಲ್‌ಔಟ್ ಆಯಿತು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

Most Popular