HomeLatest Newsವನಿತೆಯರ ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಸೋತು ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದು ಮುಖಭಂಗ ಅನುಭವಿಸಿದ...

ವನಿತೆಯರ ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಸೋತು ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದು ಮುಖಭಂಗ ಅನುಭವಿಸಿದ ಭಾರತ!

ನಿನ್ನೆ ( ಜೂನ್ 28 ) ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವನಿತೆಯರ ಟಿ ಟ್ವೆಂಟಿ ವಿಶ್ವಕಪ್ 2026ರ ಲೀಗ್ ಹಂತದ 30ನೇ ಪಂದ್ಯದಲ್ಲಿ ಭಾರತದ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿದ ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸಿತು. ಇತ್ತ ಈ ಪಂದ್ಯ ಗೆದ್ದರೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಹೊಂದಿದ್ದ ಭಾರತ ಸೋಲನ್ನು ಕಂಡ ಕಾರಣ ಟೂರ್ನಿಯಿಂದ ಲೀಗ್ ಹಂತದಲ್ಲೇ ಹೊರಬಿದ್ದಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 170 ರನ್ ಕಲೆಹಾಕಿ ಆಸ್ಟ್ರೇಲಿಯಾಗೆ 148 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಬಾರಿಸಿತು.

ಭಾರತದ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 37 ಎಸೆತಗಳಲ್ಲಿ 38, ಶಫಾಲಿ ವರ್ಮಾ 26 ಎಸೆತಗಳಲ್ಲಿ 34, ಜೆಮಿಮಾ ರೊಡ್ರಿಗಸ್ (ರಿಟೈರ್ಡ್ ಹರ್ಟ್) 28 ಎಸೆತಗಳಲ್ಲಿ 34, ನಾಯಕಿ ಹರ್ಮನ್‌ಪ್ರೀತ್ ಕೌರ್ 27 ಎಸೆತಗಳಲ್ಲಿ 56, ರಿಚಾ ಘೋಷ್ ಅಜೇಯ 1 ಹಾಗೂ ದೀಪ್ತಿ ಶರ್ಮಾ ಅಜೇಯ 4 ರನ್ ಕಲೆಹಾಕಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಟ್ರೇಲಿಯಾ ಪರ ಸೋಫಿ ಮೊಲಿನ್ಯೂಕ್ಸ್ ಎರಡು ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಇನ್ನಿಂಗ್ಸ್: ತಂಡ 68 ರನ್‌ಗೆ 3 ವಿಕೆಟ್ ಕಳೆದುಕೊಂಡಿತಾದರೂ ಎಲ್ಲಿಸ್ ಪೆರ್ರಿ ಹಾಗೂ ಆಷ್ಲಿ ಗಾರ್ಡ್ನರ್ ಶತಕದ ಜತೆಯಾಟದ ನೆರವಿನಿಂದ ಚೇತರಿಸಿಕೊಂಡು ಗೆಲುವಿನ ದಡ ಸೇರಿತು. ಜಾರ್ಜಿಯಾ ವಾಲ್ 4, ಬೆಥ್ ಮೂನಿ 22, ಫ್ಯೂಬ್ ಲಿಚ್‌ಫೀಲ್ಡ್ 24, ಎಲಿಸ್ ಪೆರಿ 38 ಎಸೆತಗಳಲ್ಲಿ 56, ಆಷ್ಲಿ ಗಾರ್ಡ್ನರ್ 29 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿದರು ಹಾಗೂ ಜಾರ್ಜಿಯಾ ವಾರೆಹಮ್ ಅಜೇಯ 4 ರನ್ ಕಲೆಹಾಕಿದರು.

ಭಾರತದ ಪರ ಶ್ರೀ ಚರಣಿ ಎರಡು ವಿಕೆಟ್, ರೇಣುಕಾ ಸಿಂಗ್ ಠಾಕೂರ್ ಹಾಗೂ ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular